ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ರಾ ಚಾಲ್ ಅವ್ಯವಹಾರ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಇದೀಗ ಸೆಷನ್ಸ್ ನ್ಯಾಯಾಲಯ ನವೆಂಬರ್ 2 ರವರೆಗೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಸೂಚಿಸಿದೆ. ಇದರಿಂದ ಸಂಜಯ್ ರಾವುತ್ ಅವರು ದೀಪಾವಳಿಯನ್ನೂ ಜೈಲಿನಲ್ಲಿ ಕಳೆಯುವಂತಾಗಿದೆ.
ಪತ್ರಾ ಚಾವ್ಲ್ ಜಮೀನು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಜುಲೈ 31 ರಂದು ಇಡಿ ಬಂಧಿಸಿತ್ತು.
ಇಂದು ಸಂಜಯ್ ರಾವುತ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ನವೆಂಬರ್ 2ಕ್ಕೆ ಮುಂದೂಡಿದೆ.
ಸಂಜಯ್ ರಾವತ್ ಅವರು ಮೊದಲಿನಿಂದಲೂ 1039 ಕೋಟಿ ರೂಪಾಯಿಗಳ ಪತ್ರಾ ಚಾಲ್ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ಈ ಪ್ರಕರಣದಲ್ಲಿ ಇಡಿ ಇತ್ತೀಚೆಗೆ ಚಾರ್ಜ್ ಶೀಟ್ ಸಲ್ಲಿಸಿತ್ತು.