‘ಪುನೀತ್ ಪರ್ವ’ದಲ್ಲಿ ಸಿಎಂ: ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಬಸವರಾಜ್ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮ ‘ಪುನೀತ್ ಪರ್ವ’ ಅದ್ಧೂರಿ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಘೋಷಣೆ ಮಾಡಿದ್ದಾರೆ. ಗಂಧದ ಗುಡಿ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಇದು.ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ ಚಿತ್ರಕ್ಕೆ ಸರ್ಕಾರ ಖಂಡಿತ ತೆರಿಗೆ ವಿನಾಯಿತಿ ಘೋಷಿಸುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಅಪ್ಪು ಅವರಿಂದ ಸ್ಪೂರ್ತಿಗೆ ಒಳಗಾದ ಯುವ ಸಮುದಾಯದ ನೋಡಿದಾಗ ಸಂತಸವಾಗುತ್ತಿದೆ. ಆದ್ರೇ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅಪ್ಪು ಬಹಳಷ್ಟು ವರ್ಷ ಬದುಕಿ ಬಾಳ ಬೇಕಿತ್ತು ಈ ನೋವು ಈಗಲೂ ಕಾಡುತ್ತಿದೆ.

ಇದೀಗ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವು ಸಂತಸ ಹಾಗೂ ಹೆಮ್ಮೆ ತಂದಿದೆ. ನವೆಂಬರ್ ಒಂದರಂದು ಅಪ್ಪುಗೆ ಕರ್ನಾಟಕ ರತ್ನ ನೀಡಲಿದ್ದೆವೆ . ಅದು ಎಲ್ಲ ಯುವಕರಿಗೆ ಪ್ರೇರಣೆ ಎಂದು ಭಾವಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!