ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹಬೌದ್ಧಿಕ ಪ್ರಮುರಾಗಿದ್ದ ಶ್ರೀ ದಿನೇಶ್ ಪೈ ದೈವಾಧೀನರಾಗಿದ್ದಾರೆ. ಈ ಹಿಂದೆ ಅವರು ಪ್ರಾಂತ ಬೌದ್ಧಿಕ ಪ್ರಮುಖರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಇವರು ‘ರಜ್ಜುಭೈಯ್ಯಾ’ ಕನ್ನಡ ಪುಸ್ತಕವನ್ನು ಬರೆದಿದ್ದರು. ತಮ್ಮ ಸಮಾಜಮುಖೀ ಕಾರ್ಯದ ಮೂಲಕ ಮಾದರಿಯಾಗಿದ್ದರು.
ಅವರ ನಿಧನಕ್ಕೆ ಆರೆಸ್ಸೆಸ್ ಕ್ಷೇತ್ರೀಯ ಕಾರ್ಯವಾಹರಾದ ನಾ. ತಿಪ್ಪೇಸ್ವಾಮಿಯವರು ಸಂತಾಪ ಸೂಚಿಸಿದ್ದು “ಆತ್ಮೀಯ ದಿನೇಶ್ ಪೈ ಅವರು ಇನ್ನಿಲ್ಲ ಎಂಬ ಸುದ್ದಿ ಮನಸ್ಸಿಗೆ ಆಘಾತ ಉಂಟು ಮಾಡಿದೆ. ಅನೇಕ ವರ್ಷಗಳಿಂದ ಸಂಘದ ವಿವಿಧ ಜವಾಬ್ದಾರಿಗಳನ್ನು ಹೊತ್ತು ಸಮರ್ಪಕವಾಗಿ ಕಾರ್ಯವನ್ನು ನಿರ್ವಹಿಸಿದರು. ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆನ್ಲೈನ್ ಮುಖಾಂತರ ಬೌದ್ಧಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದರು. ಅವರು ಹೊಸ ಹೊಸ ಯೋಜನೆಗಳನ್ನು ರೂಪಿಸಿ ಕಾರ್ಯದಲ್ಲಿ ನಾವೀನ್ಯತೆ ತರುತ್ತಿದ್ದರು”
“ಇಂತಹ ಒಬ್ಬ ಕಾರ್ಯಕರ್ತನನ್ನು ಆಕಸ್ಮಿಕವಾಗಿ ಕಳೆದುಕೊಂಡಿರುವುದು ಅತ್ಯಂತ ದುಃಖವನ್ನುಂಟು ಮಾಡಿದೆ ಭಗವಂತ ಅವರ ಕುಟುಂಬ ವರ್ಗದವರಿಗೆ ಕಾರ್ಯಕರ್ತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುವೆ” ಎಂದು ಅವರು ಸಂತಾಪ ಸೂಚಿಸಿದ್ದಾರೆ.