ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮನೆಗಳ ಮೇಲೆ ಭೂಕುಸಿತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಶನಿವಾರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಇದರಲ್ಲಿ ಒಂದು ಕುಟುಂಬದ 5 ಸದಸ್ಯರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಇದು ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಭೂಕುಸಿತ ಸಂಭವಿಸಿದೆ ಎನ್ನಲಾಗಿದ್ದು ಭೂಕುಸಿತದ ವಿಷಯ ತಿಳಿಯುತ್ತಿದ್ದಂತೆ ಸಂಬಂಧ ಅಧಿಕಾರಿಗಳು, ಇಲಾಖೆ ಕೂಡಲೇ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಪ್ರಾರಂಭಿಸಿದೆ ಎಂದು ಪಿಟಿಐ ವರದಿ ಹೇಳಿದೆ.
ಥರಾಲಿಯಲ್ಲಿ ಮನೆಗಳಿಗೆ ಅವಶೇಷಗಳು ಅಪ್ಪಳಿಸಿರುವ ಬಗ್ಗೆ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಎಸ್ಡಿಆರ್ಎಫ್ಗೆ ಮಾಹಿತಿ ನೀಡಲಾಯಿತು. ನಂತರ, ಜನರಲ್ ಎಸ್ಡಿಆರ್ಎಫ್, ಮಣಿಕಾಂತ್ ಮಿಶ್ರಾ ಅವರು ತಕ್ಷಣ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸುವಂತೆ ಎಸ್ಡಿಆರ್ಎಫ್ ರಕ್ಷಣಾ ತಂಡಕ್ಕೆ ಸೂಚಿಸಿದರು. ಮೇಲಿನ ಆದೇಶಕ್ಕೆ ಅನುಸಾರವಾಗಿ, ಹುಮ್ರಾ ತಂಡವು ತಕ್ಷಣವೇ ರಕ್ಷಣಾ ಸಾಧನಗಳೊಂದಿಗೆ ಸ್ಥಳಕ್ಕೆ ತಲುಪಿದೆ ಎನ್ನಲಾಗಿದೆ.