ಗೃಹ ಸಚಿವ ಅಮಿತ್ ಶಾ ಜನ್ಮದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಗೃಹ ಸಚಿವ ಅಮಿತ್ ಶಾ ಅವರು ಇಂದು ತಮ್ಮ 58 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರದಂತೆ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.
“ಭಾರತದ ಗೃಹ ಸಚಿವರಾಗಿ ಅಮಿತ್‌ ಶಾ ರಾಷ್ಟ್ರದ ಪ್ರಗತಿಗೆ ಹಲವಾರು ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರು ದೇಶಸೇವೆಯಲ್ಲಿ ದೀರ್ಘಕಾಲ ತೊಡಗುವಂತಾಗಲಿ ಹಾಗೂ ಅವರು ಆರೋಗ್ಯಕರ ಜೀವನವನ್ನು ನಡೆಸಲಿ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

 

 

ಹಲವಾರು ಇತರ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಗೃಹಸಚಿವರ ಜನ್ಮದಿನದಂದು ಶುಭಾಶಯ ಕೋರಿದ್ದಾರೆ.
ʼಭಾರತದ ಆಂತರಿಕ ಭದ್ರತೆಯನ್ನು ಬಲಪಡಿಸಲು ಶಾ ಅವರು ಸಮರ್ಪಿತ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರಿಗೆ ವಹಿಸಲಾದ ಪ್ರತಿಯೊಂದು ಜವಾಬ್ದಾರಿಯನ್ನು ಅವರು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆʼ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದವರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಭೂಪೇಂದರ್ ಯಾದವ್ ಕೂಡ ಸೇರಿದ್ದಾರೆ.
ಮೂರು ದಶಕಗಳಿಗೂ ಹೆಚ್ಚು ಕಾಲ ಶ್ರೀ ಮೋದಿಯವರ ನಿಕಟ ಸಹವರ್ತಿ, ಅಮಿತ್ ಷಾ ಅವರು 2014 ರಲ್ಲಿ ಬಿಜೆಪಿ ಅಧ್ಯಕ್ಷರಾದ ಬಳಿಕ ಕೇಸರಿ ಪಕ್ಷವನ್ನು ಬೃಹತ್ ಆಗಿ ವಿಸ್ತರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!