ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕದ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯಾತ್ರೆ ಇಂದಿಗೆ ಮುಕ್ತಾಯವಾಗಿದ್ದು, ನಾಳೆ ತೆಲಂಗಾಣಕ್ಕೆ ಪ್ರವೇಶಿಸಲಿದೆ. ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ರಾಯಚೂರಿನ ವಾಲ್ಕಾಟ್ ಮೈದಾನದಲ್ಲಿ ಬೀಳ್ಕೊಡುಗೆ ನೀಡಲಾಯಿತು.
ಇನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾತ್ರೆಗೆ ಮೂರು ದಿನ ಬಿಡುವು ನೀಡಲಾಗಿದೆ.
ಇಂದು ರಾಯಚೂರಿನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್, ಕರ್ನಾಟಕದಲ್ಲಿ 500 ಕಿಲೋಮೀಟರ್ ಗೂ ಅಧಿಕ ಪಾದಯಾತ್ರೆ ಮಾಡಿದ್ದೇವೆ. ಯಾತ್ರೆಯ ವೇಳೆ ತಾವು ತೋರಿಸಿದ ಪ್ರೀತಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.
ನಮ್ಮ ತಾಯಿಯವರನ್ನು ಬಳ್ಳಾರಿ ಕ್ಷೇತ್ರದ ಜನ ಗೆಲ್ಲಿಸಿದ್ದರು. ಅವರ ಪ್ರೀತಿಯನ್ನು ಎಂದಿಗೂ ಮರೆಯುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.