ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತ್ ಜೋಡೋ ಯಾತ್ರೆಯಲ್ಲಿ ಇಂದು ಚಿತ್ರ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಭಾಗಿಯಾದರು. ಶನಿವಾರ ರಾಯಚೂರಿನಲ್ಲಿ ನಡೆದ ಪಾದಯಾತ್ರೆಯಲ್ಲಿ ರಮ್ಯಾ ಕೂಡಾ ರಾಹುಲ್ ಜೊತೆ ಹೆಜ್ಜೆ ಹಾಕಿದರು.
ನಟಿ ರಮ್ಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತೀಚೆಗೆ ಕಾಂಗ್ರೆಸ್ನಿಂದ ದೂರ ಉಳಿದುಕೊಂಡಿದ್ದ ರಮ್ಯಾ ಇದೀಗ ಮತ್ತೆ ಕಾಂಗ್ರೆಸ್ ಜೊತೆ ಕಾಣಿಸಿಕೊಂಡಿದ್ದಾರೆ. ರಾಹುಲ್ ಜೊತೆ ಕೆಲ ಹೊತ್ತು ಹೆಜ್ಜೆ ಹಾಕಿದ್ದಾರೆ.