ಹೊಸದಿಗಂತ ಡಿಜಿಟಲ್ ಡೆಸ್ಕ್
ಕಾಂತಾರ ಚಿತ್ರದ ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂಬ ಟೀಕೆ ಮಾಡಿದ್ದ ನಟ ಚೇತನ್ ವಿರುದ್ಧ ಈಗಾಗಲೇ ರಾಜ್ಯದ ವಿವಿಧೆಡೆ ಹಲವು ಎಫ್ಐಆರ್ ದಾಖಲಾಗಿದ್ದು, ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ನಟ ಚೇತನ್ ಹೇಳಿಕೆಯು ಕೋಮು ಕೋಮುಗಳ ನಡುವೆ ದ್ವೇಷ ಉಂಟು ಮಾಡುತ್ತಿದೆ ಎಂಬುದಾಗಿ ಶಿವಕುಮಾರ್ ಎಂಬುವರು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಹಿನ್ನಲೆಯಲ್ಲಿ ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.