ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ೫ ವಿಕೆಟ್ ಗಳ ಗೆಲುವು ಸಾಧಿಸಿದೆ.
ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನೀಡಿರುವ 160 ರನ್‌ಗಳ ಗುರಿ ಬೆನ್ನತ್ತಿರುವ ಟೀಂ ಇಂಡಿಯಾ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ವಿರಾಟ್ ಕೊಹ್ಲಿ , ಪಾಂಡ್ಯ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಗೆಲುವು ತನ್ನದಾಗಿಸಿಗೊಂಡಿತು.
ಆರಂಭದಲ್ಲಿ ಕೆ ಎಲ್ ರಾಹುಲ್(4), ರೋಹಿತ್ ಶರ್ಮಾ(4) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲರಾದರು. ಇನ್ನು ಇನ್‌ಫಾರ್ಮ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೇವಲ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಪವರ್ ಪ್ಲೇ ಅಂತ್ಯದ ವೇಳೆಗೆ ಭಾರತ 3 ವಿಕೆಟ್ ಕಳೆದುಕೊಂಡು 31 ರನ್ ಬಾರಿಸಿತ್ತು.
ಕೇವಲ 31 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ 5ನೇ ವಿಕೆಟ್‌ಗೆ ಜತೆಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ-ಹಾರ್ದಿಕ್ ಪಾಂಡ್ಯ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
ಕೊನೆಯ ಓವರ್‌ನಲ್ಲಿ ಭಾರತ ಗೆಲ್ಲಲು 16 ರನ್‌ಗಳ ಅಗತ್ಯವಿತ್ತು. 20ನೇ ಓವರ್ ಬೌಲಿಂಗ್ ಮಾಡುವ ಜವಾಬ್ದಾರಿ ಹೊತ್ತ ಮೊಹಮ್ಮದ್ ನವಾಜ್ ಮೊದಲ ಎಸೆತದಲ್ಲೇ ಹಾರ್ದಿಕ್ ಪಾಂಡ್ಯ ವಿಕೆಟ್ ಕಬಳಿಸಿದರು. ಎರಡನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ಒಂದು ರನ್ ತಂದುಕೊಟ್ಟರು. ಮೂರನೇ ಎಸೆತದಲ್ಲಿ ವಿರಾಟ್ ಕೊಹ್ಲಿ ಎರಡು ರನ್ ತಂದುಕೊಟ್ಟರು. ಮರು ಎಸೆತದ ನೋಬಾಲ್‌ಗೆ ಕೊಹ್ಲಿ ಸಿಕ್ಸರ್ ಬಡಿದರು. ಹೀಗಾಗಿ ಕೊನೆಯ ಮೂರು ಎಸೆತಗಳಲ್ಲಿ 6 ರನ್‌ಗಳ ಅಗತ್ಯವಿತ್ತು. ಮರು ಎಸೆತ ವೈಟ್ ಆಯಿತು. ನಂತರ ನಾಲ್ಕನೇ ಎಸೆತದಲ್ಲಿ ಬೈ ಮೂಲಕ 3 ರನ್ ಗಳಿಸಿದರು. ಇನ್ನು ಕೊನೆಯ ಎರಡು ಎಸೆತಗಳಲ್ಲಿ 2 ರನ್‌ಗಳ ಅಗತ್ಯವಿತ್ತು. ಆದರೆ 5ನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ರನೌಟ್ ಆದರು. ಕೊನೆಯ ಎಸೆತದಲ್ಲಿ ಭಾರತ ಗೆಲ್ಲಲು 2 ರನ್‌ಗಳ ಅಗತ್ಯವಿತ್ತು. ಮತ್ತೆ ನವಾಜ್ ವೈಡ್ ಎಸೆತದರು. ಹೀಗಾಗಿ ಕೊನೆಯ ಎಸೆತದಲ್ಲಿ ಒಂದು ರನ್ ಅಗತ್ಯವಿತ್ತು. ಅಶ್ವಿನ್ ತಂಡವನ್ನು ಗೆಲುವಿನ ರನ್ ಬಾರಿಸಿದರು.