ರಾಜ್ಯಪಾಲರ ಅಂತಿಮ ಆದೇಶದವರೆಗೆ 9 ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಮುಂದುವರಿಯಬಹುದು: ಕೇರಳ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಸದ್ಯ ಬಹುಚರ್ಚೆಗೆ ಕಾರಣವಾಗಿರುವ ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ತಮ್ಮ ಸ್ಥಾನದಿಂದ ಕೂಡಲೇ ಕೆಳಗಿಳಿಯುವಂತೆ ಶೋಕಾಸ್‌ ನೋಟಿಸ್‌ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ ತೀರ್ಪು ನೀಡಿದ್ದು ಕುಲಪತಿಯಾಗಿರುವ ರಾಜ್ಯಪಾಲರು ಅಂತಿಮ ಆದೇಶವನ್ನು ಹೊರಡಿಸುವವರೆಗೆ ಉಪಕುಲಪತಿಗಳು ತಮ್ಮ ಹುದ್ದೆಗಳಲ್ಲಿ ಮುಂದುವರಿಯಬಹುದು ಎಂದು ಹೇಳಿದೆ.

“ಕುಲಪತಿಗಳು ಅಂತಿಮ ಆದೇಶವನ್ನು ನೀಡುವವರೆಗೆ, ಅರ್ಜಿದಾರರು ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಅರ್ಹರಾಗಿರುತ್ತಾರೆ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ, ಆದಾಗ್ಯೂ, ಅವರು ಕಾನೂನು ಮತ್ತು ನಿಬಂಧನೆಗಳ ಸಂಪೂರ್ಣ ಅನುಸರಣೆಯಲ್ಲಿ ಕಾರ್ಯನಿರ್ವಹಿಸಬಹುದಾಗಿದೆ” ಎಂದು ಪೀಠವು ಹೇಳಿದೆ ಎಂದು ಮೂಲಗಳು ವರದಿ ಮಾಡಿವೆ.

ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ಈ ವಿಚಾರಣೆ ನಡೆಸಿತು.

ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಎತ್ತಿ ಹಿಡಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕೇರಳದ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ರಾಜ್ಯಪಾಲರ ಆದೇಶದ ವಿರುದ್ಧ ಉಪಕುಲಪತಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!