ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಧ ಮಕ್ಕಳಿರುವ ಬೋರ್ಡಿಂಗ್ ಶಾಲೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 11 ಮಕ್ಕಳು ಜೀವಂತ ದಹನಗೊಂಡ ಹೃದಯ ವಿದ್ರಾವಕ ಘಟನೆ ಉಗಾಂಡಾದ ರಾಜಧಾನಿ ಕಂಪಾಲದ ಮುಕೊನೊ ಜಿಲ್ಲೆಯ ಸಲಾಮಾ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಆರು ಮಂದಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯರಾತ್ರಿಯ ಸುಮಾರಿಗೆ ನಮ್ಮ ವಸತಿ ನಿಲಯವೊಂದು ಬೆಂಕಿಗೆ ಆಹುತಿಯಾಯಿತು. ಇದು ಯುವತಿಯರಿಗಾಗಿ ಇರುವ ವಸತಿ ನಿಲಯಗಳಲ್ಲಿ ಒಂದಾಗಿದೆ. ಈ ಘಟನೆಯಲ್ಲಿ ದುರದೃಷ್ಟವಶಾತ್ 11 ಬಾಲಕಿಯರು ಮೃತಪಟ್ಟಿದ್ದಾರೆ ಎಂದು ಶಾಲೆಯ ಸಂಸ್ಥಾಪಕ ಫ್ರಾನ್ಸಿಸ್ ಕಿನುಬಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಸೇನಾ ಅಽಕಾರಿಗಳು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ ಸ್ಥಳದಲ್ಲಿ ಯಾವುದೇ ಬೆಂಕಿ ನಂದಿಸುವ ಉಪಕರಣಗಳಿಲ್ಲ. ಕೆಲವು ಪ್ರಕರಣಗಳಲ್ಲಿ ಕಳಪೆ ವಿದ್ಯುತ್ ಸಂಪರ್ಕವೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.