ಹೊಸದಿಗಂತ ವರದಿ ಅಂಕೋಲಾ:
ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕಾರವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ, ತಾಲೂಕು ಆಡಳಿತ ಅಂಕೋಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಮತ್ತು ಜೈಹಿಂದ್ ಹೈಸ್ಕೂಲ್ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ 67 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ತಾಲೂಕು ಮಟ್ಟದ ಕಾರ್ಯಕ್ರಮ ಜೈಹಿಂದ್ ಹೈಸ್ಕೂಲ್ ಆವರಣದಲ್ಲಿ ನಡೆಯಿತು.
ಕನ್ನಡದಾಂಬೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಬಾವುಟ, ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ವಿವಿಧ ವೇಷ ಭೂಷಣಗಳೊಂದಿಗೆ ಪಾಲ್ಗೊಂಡು ನಾಡಗೀತೆ ಸೇರಿದಂತೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ದಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ ಮತ್ತು ಮತ್ತು ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಿದರು.ತಹಶೀಲ್ಧಾರ ಉದಯ ಕುಂಬಾರ ಸಂಕಲ್ಪವಿಧಿ ಭೋದಿಸಿದರು.
ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ್, ಮುಖ್ಯಾಧಿಕಾರಿ ಎನ್. ಎಂ.ಮೇಸ್ತ, ತಾಲೂಕು ವೈದ್ಯಾಧಿಕಾರಿ ನಿತಿನ್ ಹೊಸ್ಮೇಳಕರ, ತಾ.ಪಂ ಕಾರ್ಯನಿರ್ವಹಣ ಅಧಿಕಾರಿ ಪಿ ವೈ ಸಾವಂತ್, ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಜೈಹಿಂದ್ ಹೈಸ್ಕೂಲ್ ಮುಖ್ಯಾಧ್ಯಾಪಕ ಪ್ರಭಾಕರ ಬಂಟ, ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.