ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಈ ಬಗ್ಗೆ ವರದಿ ನೀಡುವಂತೆ ವಿಮಾನಯಾನ ಸಚಿವಾಲಯ ಹೇಳಿದೆ.
ಇಂಜಿನ್ನಲ್ಲಿ ಬೆಂಕಿ ಕಾಣಿಸಿದ್ದು, ವಿಮಾನದಿಂದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು- ನೋವು ಸಂಭವಿಸಿಲ್ಲ. ವಿಮಾನದಲ್ಲಿದ್ದ 177 ಪ್ರಯಾಣಿಕರು ಹಾಗೂ ಏಳು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.
ಜ್ವಾಲೆ ಹತ್ತಿರುವ ವಿಡಿಯೋ ಪ್ರಯಾಣಿಕರೊಬ್ಬರ ಸೆರೆ ಸಿಕ್ಕಿದೆ. ಟೇಕ್ಆಫ್ ವಿಡಿಯೋ ಮಾಡಲು ಪ್ರಯಾಣಿಕರೊಬ್ಬರು ಫೋನ್ನಲ್ಲಿ ವಿಡಿಯೋ ಮಾಡುತ್ತಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂಲಗಳು ತಕ್ಷಣ ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಬೆಂಕಿ ಹೊತ್ತಿರುವ ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತನಿಖೆಗೆ ಆದೇಶಿಸಿದೆ. ಇಂಡಿಗೋ ಏರ್ಲೈನ್ಸ್ ಹೇಳಿಕೆ ಬಿಡುಗಡೆ ಮಾಡಿದ್ದು, ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿದೆ. ತಕ್ಷಣ ಪೈಲೆಟ್ ಟೇಕ್ಆಫ್ ಸ್ಥಗಿತಗೊಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಲಾಗಿದೆ. ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದಿದ್ದಾರೆ.
#Breaking:#Emergency declared at Delhi airport after suspected ‘#fire’ on Bengaluru-bound #IndiGo flight #6E2131
दिल्ली से बेंगलुरु जा रही इंडिगो की फ्लाइट (6E-2131) में एक संदिग्ध चिंगारी के बाद उसे दिल्ली हवाई अड्डे पर उतारा गया है।@DCPIGI @CISFHQrs @AAI_Official @IndiGo6E pic.twitter.com/qT79Eg6zkI
— 𝐑𝐚𝐣𝐩𝐮𝐭 𝐊𝐀𝐏𝐈𝐋 𝐂𝐡𝐚𝐮𝐡𝐚𝐧 (@KapilChauhan352) October 28, 2022