86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಹೊಸದಿಗಂತ ವರದಿ,ಹಾವೇರಿ:

ಹಾವೇರಿಯಲ್ಲಿ ಜರುಗಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಅತ್ಯಂತ ವಿಶಿಷ್ಠ ರೀತಿಯಲ್ಲಿ ಜಿಲ್ಲೆಯ ಆಸ್ಮಿತೆಯನ್ನು ಬಿಂಬಿಸುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು ಅದನ್ನು ಹಾವೇರಿಯಲ್ಲಿಂದು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಮತ್ತು ಕಾರ್ಮಿಕ ಖಾತೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ, ಶಾಸಕ ನೆಹರು ಓಲೇಕಾರ ಸೇರಿದಂತೆ ಇನ್ನು ಅನೇಕ ಗಣ್ಯರು ಸೇರಿ ಲಾಂಛನವನ್ನು ಬಿಡುಗಡೆ ಮಾಡಿದರು.

೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಹಾವೇರಿಯ ಯಲಕ್ಕಿ ಮಾಲೆ, ರಾಣೇಬೆನ್ನೂರಿನ ಕೃಷ್ಣಮೃಗ ಅಭಯಾರಣ್ಯ, ಬಂಕಾಪುರದ ನವಿಲು ಧಾಮ, ಬ್ಯಾಡಗಿಯ ಕೆಂಪು ಮೆಣಸಿನಕಾಯಿ, ಮದಗದ ಕೆರೆ, ಗೊಟಗೋಡಿ ಜಾನಪದ ವಿವಿಯ ಘೋಷ ವಾಖ್ಯ, ಗಳಗನಾಥದ ಗಳಗನಾಥೇಶ್ವರ ದೇವಸದ್ಥಾನ, ಹಾವೇರಿಯ ಪುರಸಿದ್ಧೇಶ್ವರ ದೇವಸದ್ಥಾನ, ಹಾನಗಲ್ಲ ಕುಮಾರ ಸ್ವಾಮೀಜಿಯವರ ಮತ್ತು ಪುಟ್ಟರಾಜ ಕವಿ ಗವಾಯಿಯವರ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ವಿ.ಕೃ.ಗೋಕಾಕರ, ಚೌಡಯ್ಯದಾನಪುರದ ಅಂಬಿಗರ ಚೌಡಯ್ಯನವರ, ಅಬಲೂರಿನ ಸರ್ವಜ್ಞರ, ಕಾಗಿನೆಲೆಯ ಕನಕದಾಸರ, ಶಿಶುವಿನಹಾಳದ ಸಂತ ಶಿಶುನಾಳ ಶರೀಫರ, ಹೆಳವನಕಟ್ಟೆ ಗಿರಿಯಮ್ಮನವರ, ಹುತಾತ್ಮ ಮಹದೇವ ಮೈಲಾರ, ಗಳಗನಾಥರ ಭಾವ ಚಿತ್ರಗಳನ್ನು ಮುದ್ರಿಸಲಾಗಿದೆ.
ಲಾಂಛನ ಬಿಡುಗಡೆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ, ನಗರಭಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ ಸಿಇಒ ಮಹ್ಮದ ರೋಷನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಮಾಜಿ ಶಾಸಕ ಶಿವರಾಜ ಸಜ್ಜನ ಹಾಗೂ ಇತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!