ಹೊಸದಿಗಂತ ವರದಿ, ಬೀದರ್:
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡ ಕೋಟಿ ಕಂಠ ಗಾಯನ ಪ್ರಯುಕ್ತ ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಏಕಕಾಲಕ್ಕೆ ಆರು ಕನ್ನಡ ಗೀತೆಗಳ ಗಾಯನ ನಡೆಯಿತು.
ಪ್ರಕೋಷ್ಠದ ಪದಾಧಿಕಾರಿಗಳು, ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಕೈದಿಗಳು ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವಾ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಸಾಮೂಹಿಕವಾಗಿ ಹಾಡಿದರು. ಆ ಬಳಿಕ ಸಂಕಲ್ಪ ವಿಧಿ ಸ್ವೀಕರಿಸಲಾಯಿತು.
ಬಿಜೆಪಿ ಕಲೆ ಮತ್ತು ಸಾಂಸ್ಕಂತಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮನ್ಮಥ ಕಾಡವಾದ ಮಾತನಾಡಿ, ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕನ್ನಡಿಗರು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡಿದ್ದಾರೆ. ಕನ್ನಡ ನಾಡು, ನುಡಿ ಹಾಗೂ ಸಂಸ್ಕಂತಿಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ನಾಡಿನ ಅಭಿವೃದ್ಧಿಗೆ ಸದಾ ಕಂಕಣ ಬದ್ಧರಾಗಿರಬೇಕು ಎಂದು ಹೇಳಿದರು.
ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಲಂಡನಕರ್ ಅವರು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಿಜೆಪಿ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶ್ರೀಕಾಂತ ಮೋದಿ, ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಯೋಗೀಶ್ ಮಠದ, ಜಿಲ್ಲಾ ಸರ್ಕಾರಿ ವಕೀಲ ಸಂಜೀವಕುಮಾರ ಸಜ್ಜನ್, ಪ್ರಮುಖರಾದ ಸಚ್ಚಿದಾನಂದ ಚಿದ್ರೆ, ಶಿವಲೀಲಾ ಚಿದ್ರೆ, ಕಾರಾಗೃಹದ ಸಿಬ್ಬಂದಿ ಫಕೀರ್ ಪಟೇಲ್, ಅಶ್ವಿನಿ, ಶ್ರೀಕಾಂತ, ಜಯಕುಮಾರ, ಸಿದ್ದನಗೌಡ ಪಾಟೀಲ, ಪ್ರಕೋಷ್ಠದ ನಗರ ಸಂಚಾಲಕ ರಾಜಕುಮಾರ ಸ್ವಾಮಿ, ಗ್ರಾಮಾಂತರ ಸಹ ಸಂಚಾಲಕ ದೇವಿದಾಸ ಚಿಮಕೋಡ್, ಸುನೀಲ್ ಸಾಗರ್ ಇದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ