Friday, November 28, 2025

ನಾನು ಮುಖ್ಯಮಂತ್ರಿ ಆಕಾಂಕ್ಷಿ…ಆದರೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಪುನರುಚ್ಚಿಸಿದರು.

2028ರ ಚುನಾವಣೆಯ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಗಿದೆ. ಸ್ವಾಮೀಜಿಗಳು ಅವರ ಸಮುದಾಯದ ಪರವಾಗಿ ಮಾತಾಡ್ತಾರೆ. ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಚಳಿಗಾಲದ ಅಧಿವೇಶನದಲ್ಲಿ ಆವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ, ಆವಿಶ್ವಾಸ ನಿರ್ಣಯ ಮಂಡಿಸಬಹುದು ಅದ್ರಲ್ಲಿ ಏನಿದೆ ಅದರಿಂದ ಯಾವುದೇ ಪ್ರಯೋಜನ ಇಲ್ಲ. ನಮಗೆ ಮೆಜರಿಟಿ ಇದೆ ಎಂದರು.

error: Content is protected !!