ರಾಜ್ಯದ ಜನರಿಗೆ ಶಾಕ್ : ಶೀಘ್ರವೇ ನಂದಿನ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗುತ್ತಿದ್ದು, ಕೆ ಎಂ ಎಫ್ ನಿಂದ ( KMF ) ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ.
ಈ ಕುರಿತಂತೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹೊಲಿಕಟ್ಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡುವ ಸಂಬಂಧ 16 ಹಾಲು ಒಕ್ಕೂಟಗಳಿಂದ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಅಲ್ಲದೇ ದರ ಏರಿಕೆ ಬಗ್ಗೆ ಕೆಎಂಎಫ್ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೂಡ ಕೈಗೊಳ್ಳಲಾಗಿದೆ ಎಂದರು.
ಶೀಘ್ರವೇ ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡಲಾಗುತ್ತದೆ. ದರ ಪರಿಷ್ಕರಣೆಯಿಂದ ಬಂದ ಹಣ ಸಂಪೂರ್ಣವಾಗಿ ರೈತರಿಗೆ ಸಿಗಲಿದೆ ಎಂಬುದಾಗಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!