ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಇದರ ಜೊತೆ ಕೆಲ ಖಾತೆಗಳು ಅಮಾನತುಗೊಂಡಿದೆ.
ಈ ಬಗ್ಗೆ ಇನ್ಸ್ಟಾಗ್ರಾಮ್ ಸ್ಪಷ್ಟನೆ ನೀಡಿದ್ದು, ಬಳಕೆದಾರರ ಖಾತೆಯಲ್ಲಿ ಕೆಲವು ತಾಂತ್ರಿಕ ದೋಷವಿರುವುದು ಕಂಡುಬಂದಿದೆ, ಈ ಬಗ್ಗೆ ಬಳಕೆದಾರರಲ್ಲಿ ಕ್ಷಮೆ ಯಾಚಿಸುತ್ತೇವೆ. ಇದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದೆ.
ಈ ತಾಂತ್ರಿಕ ದೋಷದಿಂದಾಗಿ ಖ್ಯಾತ ಫುಟ್ಬಾಲ್ ತಾರೆ ಕ್ರಿಶ್ಚಿಯಾನೋ ರೊನಾಲ್ಡೋ ಅವರು ತಮ್ಮ 3 ಮಿಲಿಯನ್ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ. ಇದಕ್ಕಿಂತ ಮೊದಲು ಇವರು 493 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದರು. ಅಲ್ಲದೆ ಸ್ವತಃ ಇನ್ಸ್ಟಾಗ್ರಾಮ್ ತನ್ನ ಒಂದು ಮಿಲಿಯನ್ ಹಿಂಬಾಲಕರನ್ನು ಕಳೆದುಕೊಂಡಿದೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆಯಿಂದ ಈ ಸಮಸ್ಯೆ ಕಂಡು ಬಂದಿದ್ದು, ಇನ್ಸ್ಟಾಗ್ರಾಮ್ ದೋಷವನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದೆ.