ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನ್ಲಲಿ ಭಾರೀ ಮಳೆ ಸುರಿಯುತ್ತಿದ್ದು, ಇನ್ನೂ ಐದು ದಿನ ಮಳೆ ಮುಂದುವರಿಯಲಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ಬೆಂಗಲೂರು ತತ್ತರಿಸಿದೆ, ಬೆಂಗಳೂರು ಜತೆಗೆ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಇರುವ ಕಾರಣ ಇನ್ನೂ ಐದ ದಿನ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ವರ್ಷಧಾರೆ ಹೆಚ್ಚಿರಲಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ, ಸಂಜೆ ವೇಳೆಗೆ ಮಳೆ ನಿರೀಕ್ಷೆ ಇದೆ. ನಾಳೆಯಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಮಿಂಚಿ ಸಹಿತ ಧಾರಾಕಾರ ಮಳೆ ಇದಾಗಿರಲಿದೆ. ತಾಪಮಾನಗಳಲ್ಲಿ ಆಗಾಗ ಬದಲಾವಣೆ ಸಾಮಾನ್ಯವಾಗಿರಲಿದೆ. ತಗ್ಗು ಪ್ರದೇಶ ಹಾಗೂ ರಾಜಕಾಲುವೆ ಬಳಿ ಇರುವವರಿಗೆ ಎಚ್ಚರದಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.
ತುಮಕೂರು, ಬೆಂಗಳೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿಯಲಿದೆ.