ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನೀರಿನ ಬಾಕಿ, ಅಸಲು ಬಿಲ್ ಕಟ್ಟಿದಂತ ಬೆಂಗಳೂರು ನಗರದ ಜನರಿಗೆ ಬಡ್ಡಿ ಮನ್ನಾ ಮಾಡುವುದು ಸೇರಿದಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಯಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ ಎಂದರು.
ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ.
ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಿದೆ. ಕೆಲವು ಅಕ್ಕಪಕ್ಕದ ಗ್ರಾಮಗಳ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 100 ಕೋಟಿ ಮೊತ್ತದಲ್ಲಿ BSWML ಮೂಲಕ ಅನುಷ್ಠಾನವಾಗಲಿದೆ.
ತಿಪ್ಪಗೊಂಡನಹಳ್ಳಿ ಜಲಾನಯನದ ಬಫರ್ ಜೋನ್ ಮರುನಿಗದಿಗೆ ಒಪ್ಪಿಗೆ ನೀಡಿದೆ.
ಕರ್ನಾಟಕ ವಿವಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ.
ಕಲಬುರಗಿಯಲ್ಲಿ 12 ಕೋಟಿ ಮೊತ್ತದ ಯೋಜನೆ ನೀಡಲಾಗಿದೆ. ಲೀಪ್ ಆಧಾರದಲ್ಲಿ ಉತ್ಕೃಷ್ಟ ಕೇಂದ್ರ ಸ್ಥಾಪನೆಗೆ ನಿರ್ಧರಿಸಿದೆ.
ಕಬ್ಬಿಣದ ಅದಿರು ನೀತಿ-2025ಕ್ಕೆ ಒಪ್ಪಿಗೆಯನ್ನು ಸಂಪುಟ ನೀಡಿದೆ. ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೂ ನಿರ್ಧರಿಸಲಾಗಿದೆ.
ನ್ಯಾಯಾಂಗ ಸೇವೆ ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆಯನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿದೆ ಎಂದು ತಿಳಿಸಿದರು.
ರಾಜ್ಯ ದತ್ತಾಂಶ ಕೇಂದ್ರದ ಕಾರ್ಯಾಚರಣೆ ವಿಪತ್ತು ಹಾಗೂ ಚೇತರಿಕಾ ಕೇಂದ್ರದ ನಿರ್ವಹಣಾ ಸೇವೆ ಎರಡು ಸೇವೆ ನೀಡುವ ಸಂಸ್ಥೆಯ ಆಯ್ಕೆಗೆ ಒಪ್ಪಿಗೆ ನೀಡಲಾಗಿದೆ. 143.6 ಕೋಟಿ ವೆಚ್ಚದಲ್ಲಿ 5 ವರ್ಷದ ಅವಧಿಗೆ ಒಪ್ಪಿಗೆ ಸೂಚಿಸಲಾಗಿದೆ.
ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣವನ್ನು 74 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ.
ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ. ಔಷಧ ಸೌಂದರ್ಯವರ್ಧಕ ವಿಧೇಯಕಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ.
ಸಿನಿ, ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಕೆಕೆ ಪ್ರದೇಶಗಳಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಕೆರೆ ಅಭಿವೃದ್ಧಿಗಳ ನಿರ್ಮಾಣಕ್ಕೆ ಅನುದಾನವಾಗಿ 200 ಕೋಟಿ ಅನುದಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ರಾಜ್ಯ ಹಜ್ ಸಮಿತಿ ನಿಯಮಾವಳಿಗೆ ಒಪ್ಪಿಗೆ ಸೂಚಿಸಲಾಗಿದೆ.
ಹಿಂಡಲಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಕಾಂಗ್ರೆಸ್ ಟ್ರಸ್ಟ್ ಗೆ ನೀಡಲು ಸಮ್ಮತಿಸಲಾಗಿದೆ.
ಕುದೂರಿನಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 3.12 ಎಕರೆ ಭೂಮಿ ಉಚಿತ ನೀಡಲು ಒಪ್ಪಿಗೆ ನೀಡಿದೆ.
ಕೆಎಸ್ ಆರ್ ಟಿಸಿಗೆ ಭೂಮಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.
ಮುಧೋಳದಲ್ಲಿ ಕಾಂಗ್ರೆಸ್ ಭವನ ನಿರ್ಮಣಕ್ಕೆ ಜಾಗ. ಝಂಜರಕೊಪ್ಪ ಗ್ರಾಮದಲ್ಲಿ 1077 ಚ.ಮೀ.ಜಾಗ ನೀಡಲಾಗುತ್ತಿದೆ. ಕಾಂಗ್ರೆಸ್ ಟ್ರಸ್ಟ್ ಗೆ ಜಾಗ ನೀಡಲು ಸಮ್ಮತಿಸಲಾಗಿದೆ.
ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನೀತಿಗೆ ಅನುಮೋದನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನಕ್ಕೆ ಒಪ್ಪಿಗೆ ನೀಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.
ಚಂದ್ರಗುತ್ತಿ ರೇಣುಕಾಂಬ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.
ಗಂಗಾವತಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕಾಗಿ 17.50 ಕೋಟಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಕೆಕೆಆರ್ ಟಿಸಿಯಿಂದ ನಿರ್ಮಿಸಲು ಅನುಮತಿ ನೀಡಲಾಗಿದೆ.
ವಾಯುವ್ಯ ಕರ್ನಾಟಕ ಸಾರಿಗೆಗೆ ಚಾಲಕರ ನೇಮಕಗೆ ಸಮ್ಮತಿಸಲಾಗಿದೆ. 1000 ಚಾಲಕರ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಕಬಿನಿ ವಿತರಣಾ ನಾಲೆಗಳ ಆಧುನೀಕರಣಕ್ಕಾಗಿ 50 ಕೋಟಿ ವೆಚ್ಚದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

