Friday, November 28, 2025

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸನ್ಮಾನ ಮಾಡಿದರು. ಈ ವೇಳೆ ತಲಾ ಐದು ಲಕ್ಷ ರೂ ಪ್ರೋತ್ಸಾಹ ಧನ ಘೋಷಿಸಿದರು.‌

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ಭೇಟಿಯಾದ ಇಬ್ಬರೂ ಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದರು.

error: Content is protected !!