ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 28 (ಶುಕ್ರವಾರ) ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ.
ಬಳಿಕ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರುಶನ ಪಡೆಯಲಿದ್ದಾರೆ. ನಂತರ ಲಕ್ಷ ಕಾಂತ ಗೀತಾ ಪಾರಾಯಣದಲ್ಲಿ ಭಾಗವಹಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
https://x.com/narendramodi/status/1994035565055103114
ಇತ್ತ ಖುದ್ದು ಪ್ರಧಾನಿ ಮೋದಿಯೇ ಈ ಖುಷಿಯನ್ನು ಹಂಚಿಕೊಂಡಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಬಣ್ಣಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.

