ಹೊಸದಿಗಂತ ಡಿಜಿಟಲ್ ಡೆಸ್ಕ್
ಖಝಾಕಿಸ್ತಾನ್ ದೇಶದ ಮಧ್ಯಭಾಗದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ ಸಂಭವಿಸಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಸೆಲರ್ ಮಿತ್ತಲ್ಗೆ ಸೇರಿದ ಲೆನಿನ್ ಗಣಿ ಪ್ರದೇಶದಲ್ಲಿ “ಡ್ರೈನೇಜ್ ಬಾವಿ ಕೊರೆಯುವ ಸಂದರ್ಭದಲ್ಲಿ ಮಿಥೇನ್ ಅನಿಲ ದಿಢೀರ್ ಬಿಡುಗಡೆಯಾಗಿದ್ದು ಐವರು ಕಾರ್ಮಿಕರ ಸಾವಿಗೆ ಕಾರಣವಾಗಿದೆ” ಎಂದು ದೇಶದ ತುರ್ತು ಸಚಿವಾಲಯದ ವಕ್ತಾರ ಹೇಳಿದ್ದಾರೆ.
“ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು 106 ಜನರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ