Friday, November 28, 2025

ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮ 40 ನಿಮಿಷ ಪ್ರೀಪೋನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರಿಂದು ಉಡುಪಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿಗಳ ಸ್ವಾಗತಕ್ಕೆ ನಗರ ಸಜ್ಜಾಗಿದೆ. ಉಡುಪಿ ನಗರ ಸಂಪೂರ್ಣ ಕೇಸರಿಮಯವಾಗಿದ್ದು, ಪ್ರಧಾನಿ ಮೋದಿಯವರನ್ನ ಸ್ವಾಗತಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ನಗರದ ಸುತ್ತಮುತ್ತ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳು ರಾರಾಜಿಸುತ್ತಿವೆ.

ಆದ್ರೆ ಪ್ರಧಾನಿಗಳ ಕಾರ್ಯಕ್ರಮದಲ್ಲಿ ಸಣ್ಣ ಬದಲಾವಣೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಪ್ರಧಾನಿಗಳ ಕಾರ್ಯಕ್ರಮ ನಿಗದಿಯಾಗಿತ್ತು. ಆದ್ರೆ ಅವರು 40 ನಿಮಿಷಗಳ ಮೊದಲೇ ಕೃಷ್ಣನಗರಿಗೆ ಬರಲಿದ್ದಾರೆ ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ. 

ಹೌದು. ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ನಗರಕ್ಕೆ ನಿಗದಿತ ಸಮಯಕ್ಕಿಂತ 40 ನಿಮಿಷಗಳ ಬೇಗನೆ ಬರಲಿದ್ದಾರೆ. 40 ನಿಮಿಷಗಳ ಕಾಲ ಕಾರ್ಯಕ್ರಮ ಪ್ರೀಪೋನ್‌ ಮಾಡಿಕೊಂಡಿದ್ದು, 2 ಗಂಟೆಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಮೋದಿ ಅವರಿಂದು ಉಡುಪಿ ನಗರಕ್ಕೆ ಆಗಮಿಸಲಿದ್ದು, ಭೇಟಿ ವೇಳೆ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಲಿದ್ದಾರೆ. ಇದಕ್ಕಾಗಿ ಇಂದು ಬೆಳಗ್ಗೆ 8 ಗಂಟೆಯಿಂದ 3 ಗಂಟೆಯವರೆಗೂ ಭಕ್ತರಿಗೆ ದೇವರ ದರುಶನ ನಿರ್ಬಂಧಿಸಲಾಗಿದೆ. ರಥಬೀದಿ, ಅಷ್ಟಮಠ-ಕೃಷ್ಣ ಮಠಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಸಂಜೆಯ ಬಳಿಕ ದೇವರ ಸಾರ್ವಜನಿಕರ ದರುಶನಕ್ಕೆ ಅವಕಾಶ ನೀಡಲಾಗುತ್ತದೆ. 

error: Content is protected !!