Friday, November 28, 2025

ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ: 56 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತವಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೆ 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಶ್ರೀಲಂಕಾ ಸರ್ಕಾರ ರಜೆ ಘೋಷಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ವಾತಾವರಣ ಮುಂದುವರಿದರೆ, ಬಂದ್‌ ಮುಂದುವರಿಯಲಿದೆ ಎಂಬುದಾಗಿಯೂ ಹೇಳಿದ್ದಾರೆ.

ರಾಜಧಾನಿ ಕೊಲಂಬೊದಿಂದ ಸುಮಾರು 300 ಕಿಲೋಮೀಟರ್ ಪೂರ್ವಕ್ಕೆ ಇರುವ ಬದುಲ್ಲಾ ಮತ್ತು ನುವಾರ ಎಲಿಯಾ ಕೇಂದ್ರ ಚಹಾ ಬೆಳೆಯುವ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 21 ಜನ ಕಾಣೆಯಾಗಿದ್ದಾರೆ, 14 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

error: Content is protected !!