ಹೊಸದಿಗಂತ ವರದಿ, ಮಂಗಳೂರು:
ರಿಯಾಲಿಟಿ ಶೋ “ಬಿಗ್ ಬಾಸ್” ಸ್ಪರ್ಧಿ ರೂಪೇಶ್ ಶೆಟ್ಟಿ ಅವರು ಬಿಗ್ ಬಾಸ್ ಆಟದ ವೇಳೆ ಆಡಿರುವ ಮಾತುಗಳ ಆಧಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿರುವ ಕುರಿತು ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಈ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.