ಹೊಸದಿಗಂತ ಡಿಜಿಟಲ್ ಡೆಸ್ಕ್:
ನನಗೆ ದುಃಖ ಮತ್ತು ನೋವಾಗಿದೆ. ತಪ್ಪಾಗಿದ್ದರೆ ಕ್ಷಮೆಯಾಚಿಸಲು ನಾನು ಹಿಂಜರಿಯುವುದಿಲ್ಲ. ಮಂಡ್ಲಾದಿಂದ ಜಬಲ್‌ಪುರ ಹೆದ್ದಾರಿಯಲ್ಲಿ, ಬರೇಲಾದಿಂದ ಮಂಡ್ಲಾವರೆಗಿನ 63 ಕಿ.ಮೀ ಉದ್ದದ ಸುಮಾರು 400 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಹೆದ್ದಾರಿಯ ಬಗ್ಗೆ ನನಗೆ ತೃಪ್ತಿ ಇಲ್ಲ ಎಂದು ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಧ್ಯಪ್ರದೇಶದ ಜಬಲ್ಪುರದಲ್ಲಿ ಹೇಳಿದ್ದಾರೆ.
ಕೇಂದ್ರ ಸಚಿವರು ಕೆಟ್ಟ ರಸ್ತೆಗಾಗಿ ಕ್ಷಮೆ ಕೇಳುತ್ತಿದ್ದಂತೆ, ಸಮಾರಂಭದಲ್ಲಿದ್ದ ಜನರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆ ರಸ್ತೆಯಲ್ಲಿ ಸಮಸ್ಯೆ ಇದೆ ಮತ್ತು ನಿಮ್ಮಲ್ಲಿ ಅನೇಕರು ತೊಂದರೆಗಳನ್ನು ಎದುರಿಸಿದ್ದೀರಿ. ನಾನು ಇಲ್ಲಿಗೆ ಬರುವ ಮೊದಲು ನನ್ನ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಯಾವ ಕೆಲಸ ಬಾಕಿ ಇದೆ, ಅದರ ಬಗ್ಗೆ ಚರ್ಚಿಸುವಂತೆ ಹೇಳಿದ್ದೇನೆ. ಪರಸ್ಪರ ಒಮ್ಮತದ ನಂತರ ಯೋಜನೆಯನ್ನು ಸ್ಥಗಿತಗೊಳಿಸಿ ಮತ್ತು ಹಳೆಯ ಕೆಲಸವನ್ನು ಸರಿಪಡಿಸುವಂತೆ ಹೇಳಿದ್ದಾರೆ. ಅದಕ್ಕಾಗಿ ಹೊಸ ಟೆಂಡರ್ ಕರೆಯುವಂತೆ ತಿಳಿಸಿದ್ದೇನೆ. ಶೀಘ್ರದಲ್ಲಿಯೇ ಖಂಡಿತವಾಗಿ ಹೊಸದಾದ ಉತ್ತಮವಾದ ಹೆದ್ದಾರಿ ನಿರ್ಮಾಣವಾಗಲಿದೆ ಎಂದು ಭರವಸೆ ನೀಡಿದರು, ಜೊತೆಗೆ ಇಲ್ಲಿಯವರೆಗೆ ಏನು ಎದುರಿಸಿದ್ದೀರೋ, ಅದಕ್ಕಾಗಿ ನಾನು ನಿಮ್ಮ ಕ್ಷಮೆ ಯಾಚಿಸುತ್ತೇನೆ ಎಂದು ಗಡ್ಕರಿ ಹೇಳಿದರು.
ತಾವು ಸಚಿವರಾಗಿದ್ದ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ ರಸ್ತೆಗಳ ನಿರ್ಮಾಣಕ್ಕಾಗಿ 6 ಲಕ್ಷ ಕೋಟಿ ಹಣ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಕೆಲಸ ಮತ್ತಷ್ಟು ವೇಗವಾಗಲು ಭೂ ಸ್ವಾಧೀನ ಮತ್ತು ಅರಣ್ಯಗಳನ್ನು ಅಡ್ಡಿಗಳನ್ನು ತೆರವು ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.