ಟಿವಿ ಚಾನೆಲ್ ಗಳಲ್ಲಿ ಇನ್ಮುಂದೆ ಪ್ರತಿದಿನ 30 ನಿಮಿಷ ರಾಷ್ಟ್ರೀಯ ಹಿತಾಸಕ್ತಿ ಪ್ರಸಾರ ಕಡ್ಡಾಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುಮಾರು 11 ವರ್ಷಗಳ ನಂತರ ಭಾರತದಲ್ಲಿ ಟಿವಿ ಚಾನೆಲ್‌ಗಳ ಅಪ್‌ಲಿಂಕ್ ಮತ್ತು ಡೌನ್‌ಲಿಂಕ್​​ ಗಾಗಿರುವ ಮಾರ್ಗಸೂಚಿಗಳನ್ನು ಅನುಮೋದಿಸಿದೆ.

ಹೊಸ ಮಾರ್ಗಸೂಚಿಯಂತೆ ದೂರದರ್ಶನ ಚಾನೆಲ್‌ ಗಳು ರಾಷ್ಟ್ರೀಯ ಹಿತಾಸಕ್ತಿ ಅಥವಾ ಸಾರ್ವಜನಿಕ ಸೇವೆಯಲ್ಲಿ ಪ್ರತಿದಿನ 30 ನಿಮಿಷಗಳ ಕಾಲ ವಿಷಯವನ್ನು ಪ್ರಸಾರ ಮಾಡಬೇಕು. ಆದಾಗ್ಯೂ, ಕ್ರೀಡೆ, ವನ್ಯಜೀವಿ ಮತ್ತು ವಿದೇಶಿ ಚಾನೆಲ್‌ಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು, ಈ ಕುರಿತಾಗಿ ನಾವು ಶೀಘ್ರದಲ್ಲೇ ಈ ಬಗ್ಗೆ ಸುತ್ತೋಲೆಯನ್ನು ತರುತ್ತೇವೆ. ಅದಕ್ಕೂ ಮೊದಲು, ನಾವು ಎಲ್ಲಾ ಮಧ್ಯಸ್ಥಗಾರರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ. ಎಲ್ಲಾ ಚಾನೆಲ್‌ಗಳು ರಾಷ್ಟ್ರೀಯ ಹಿತಾಸಕ್ತಿಯಲ್ಲಿ 30 ನಿಮಿಷಗಳ ಕಾಲ ವಿಷಯವನ್ನು ಪ್ರಸಾರ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ಶಿಕ್ಷಣ ಮತ್ತು ಸಾಕ್ಷರತೆಯ ಹರಡುವಿಕೆಯನ್ನು ಒಳಗೊಂಡಿವೆ. ಜೊತೆಗೆ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ ಮತ್ತು ತಂತ್ರಜ್ಞಾನ, ಮಹಿಳೆಯರ ಕಲ್ಯಾಣ, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆ ಮತ್ತು ರಾಷ್ಟ್ರೀಯ ಏಕೀಕರಣದ ರಕ್ಷಣೆ ಇವೆ ಮೊದಲಾದ ವಿಷಯಗಳನ್ನು ಇರುತ್ತದೆ.

ಇನ್ನು ಸ್ಪೋರ್ಟ್ಸ್ ಚಾನೆಲ್‌ಗಳು ಮತ್ತು ಇತರ ವಿಷಯಗಳಂತಹ ವಾಹಿನಿಗಳು ತಮ್ಮ ವಿಷಯವನ್ನು ಸೂಕ್ತವಾಗಿ ಮಾರ್ಪಡಿಸಬಹುದು. ರಾಷ್ಟ್ರೀಯ ಹಿತಾಸಕ್ತಿಯಲ್ಲಿ ವಿಷಯವನ್ನು ಪ್ರಸಾರ ಮಾಡಲು ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಚಾನೆಲ್‌ಗಳಿಗೆ ಸಾಮಾನ್ಯ ಸಲಹೆಗಳನ್ನು ನೀಡಬಹುದು. ಅದನ್ನು ಚಾನಲ್ ಅನುಸರಿಸಬೇಕು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!