ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪೇಗೌಡ ಪ್ರತಿಮೆ ಅನಾವರಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ಮುಂತಾದ ಕಾರ್ಯಕ್ರಮದಲ್ಲಿ ಭಾಗವಾಗಿ ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಾಳೆಯ ದಿನ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.
I look forward to being in the vibrant city of Bengaluru tomorrow, 11th November. I am honoured to be getting the opportunity to unveil a statue of Sri Nadaprabhu Kempegowda.
— Narendra Modi (@narendramodi) November 10, 2022
‘ರೋಮಾಂಚಕ ನಗರದವಾದ ಬೆಂಗಳೂರಿಗೆ ತೆರಳಲು ಎದುರು ನೋಡುತ್ತಿದ್ದೇನೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರ ಪುತ್ಥಳಿ ಲೋಕಾರ್ಪಣೆ ಮಾಡುವ ಅವಕಾಶ ಲಭಿಸಿರುವುದು ನನಗೆ ಗೌರವ ತಂದಿದೆ’ ಎಂದು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.