ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಫೈನಲ್ ನಾಳೆ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇತ್ತ 1992ರ ಏಕದಿನ ವಿಶ್ವಕಪ್ ಟೂರ್ನಿಗೂ ಹಾಗೂ 2022ರ ಟಿ20 ವಿಶ್ವಕಪ್ ಟೂರ್ನಿಗೂ ಸಾಕಷ್ಟು ಹೋಲಿಕೆಗಳಿವೆ 1992ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಮ್ರಾನ್ ಖಾನ್ ನಾಯಕತ್ವದ ಪಾಕಿಸ್ತಾನ ತಂಡವು ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಹೀಗಾಗಿ 1992ರ ವಿಶ್ವಕಪ್ ಪಂದ್ಯಕ್ಕೆ ಹೋಲಿಕೆ ಮಾಡಿರುವ ಭಾರತದ ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್, `ಪಾಕಿಸ್ತಾನ 2022ರ ಟಿ20 ವಿಶ್ವಕಪ್ ಗೆದ್ದರೇ 2048ಕ್ಕೆ ತಂಡದ ನಾಯಕ ಬಾಬರ್ ಆಜಂ ಪ್ರಧಾನಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.