ದೆಹಲಿ ಸಾರಾಯಿ ಹಗರಣ: ಮತ್ತಿಬ್ಬರು ಆಪ್‌ ಸದಸ್ಯರನ್ನು ವಶಕ್ಕೆ ಪಡೆದ ಇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಆಮ್ ಆದ್ಮಿ ಪಕ್ಷದ (ಎಎಪಿ) ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ ಅವರನ್ನು ಬಂಧಿಸಿದೆ.

ಇಬ್ಬರನ್ನೂ ಫೆಡರಲ್ ತನಿಖಾ ಸಂಸ್ಥೆ ಭಾನುವಾರ ರಾತ್ರಿ ಕಸ್ಟಡಿಗೆ ತೆಗೆದುಕೊಂಡಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಾಯರ್ ಮತ್ತು ಅಭಿಷೇಕ್ ಬೋನಪಲ್ಲಿ ಅವರನ್ನು ಸಿಬಿಐ ಬಂಧಿಸಿತ್ತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎನ್ನಲಾಗಿದೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಸೋಮವಾರ ಸಂಜೆ 4 ಗಂಟೆಗೆ ವಿಚಾರಣೆ ನಡೆಸಬೇಕಿತ್ತು. ಆದರೆ, ಜಾಮೀನು ವಿಚಾರಣೆಗೆ ಮುನ್ನ ಇಡಿ ಅವರನ್ನು ಬಂಧಿಸಿತ್ತು. ಪ್ರಸ್ತುತ ದೆಹಲಿ ಸಾರಾಯಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!