ಕಲ್ಯಾಣ ಕರ್ನಾಟಕ ಭಾಗದ 13 ಜನರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ

ಹೊಸದಿಗಂತ ವರದಿ, ಕಲಬುರಗಿ:

ಸೇಡಂ ತಾಲೂಕಿನ ಕ್ರಿಡಾಂಗಣದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ 13 ಸಹಕಾರಿ ಧುರೀಣರಿಗೆ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲೆಯ ಸೇಡಂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ ಸೇರಿ 13 ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನ ಉಪಾಧ್ಯಕ್ಷ ಡಾ. ಸುರೇಶ ಸಜ್ಜನ, ನಿರ್ದೇಶಕರಾದ ಶರಣ ಬಸಪ್ಪ ಪಾಟೀಲ್ ಅಷ್ಠಗಾ, ಹಿರಿಯ ಸಹಕಾರಿ ಅಪ್ಪಾರಾವ ಪಾಟೀಲ್ ಅತನೂರ, ಬೀದರ್ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಸೇರಿದಂತೆ 13 ಜನ ಸಹಕಾರಿ ರತ್ನ ಪ್ರಶಸ್ತಿ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!