February 6, 2026
Friday, February 6, 2026
spot_img

ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀಪ್ರಕಾಶ್ ಜೈಸ್ವಾಲ್ ಅವರು ಶುಕ್ರವಾರ ಕಾನ್ಪುರದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಶುಕ್ರವಾರ ಸಂಜೆ ತೀವ್ರ ಅಸ್ವಸ್ಥರಾದರ ಜೈಸ್ವಾಲ್ ರನ್ನು ಮೊದಲು ಕಿದ್ವಾಯಿ ನಗರದಲ್ಲಿರುವ ನರ್ಸಿಂಗ್ ಹೋಂಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜೈಸ್ವಾಲ್ 2000 ರಿಂದ 2002 ರವರೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ (ಯುಪಿಸಿಸಿ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅಡಿಯಲ್ಲಿ, ಅವರು ಪ್ರಮುಖ ಖಾತೆಗಳನ್ನು ಹೊಂದಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !