ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದು ಮತ್ತು ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿದ್ದು, ಯಾರೂ ಬದಲಾಯಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದ್ದಾರೆ.
ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರದ ಪ್ರಧಾನ ಕಚೇರಿಯಲ್ಲಿ ಸಂಘದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಭಾರತದ ಪುರಾತನ ವೈಶಿಷ್ಟ್ಯವೆಂದು ಒತ್ತಿಹೇಳಿದ್ದಾರೆ. ಎಲ್ಲರನ್ನು ಒಗ್ಗೂಡಿಸುವ ಚಿಂತನೆ ಎಂದರೆ ಅದು ಹಿಂದುತ್ವ ಎಂದು ಹೇಳಿದ್ದಾರೆ.
1925 ರಿಂದ ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದುಗಳು ಎಂದು ಹೇಳುತ್ತಿದ್ದೇವೆ. ಭಾರತವನ್ನು ತಮ್ಮ ಮಾತೃಭೂಮಿ ಎಂದು ಪರಿಗಣಿಸುವವರು ಮತ್ತು ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿಯೊಂದಿಗೆ ಬದುಕಲು ಬಯಸುತ್ತಾರೆ. ಯಾವುದೇ ಧರ್ಮ, ಸಂಸ್ಕೃತಿ, ಭಾಷೆ, ಆಹಾರ ಪದ್ಧತಿ ಮತ್ತು ಸಿದ್ಧಾಂತವನ್ನು ಅನುಸರಿಸಿದರೂ ಅವರು ಹಿಂದುಗಳೇ ಎಂದು ಹೇಳಿದ್ದಾರೆ.