March 14, 2026
Saturday, March 14, 2026
spot_img

ಡಿಸಿಎಂ ಡಿಕೆಶಿ ಜೊತೆ ತಿಂಡಿ ಮಾಡಿ ಮಾತುಕತೆ ನಡೆಸಿದೆ: ಸಿಎಂ ಟ್ವೀಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಈ ನಡುವಲ್ಲೇ ಉಪಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಈ ಕುರಿತ ಫೋಟೋ ಹಂಚಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಇಬ್ಬರೂ ಉಪಹಾರ ಸೇವಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದರಂತೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಪೋಸ್ಟ್ ಮಾಡಿದ್ದು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು ಎಂದು ಹೇಳಿ, ಫೋಟೋವನ್ನು ಹಂಚಿಕೊಂಡಿದ್ದಾರೆ.

ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ್ದು, ಅದರಂತೆ ಸಿಎಂ ನಿವಾಸದಲ್ಲಿ ಬ್ರೇಕ್ ಫಾಸ್ಟ್‌ ಮೀಟಿಂಗ್ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !