January22, 2026
Thursday, January 22, 2026
spot_img

ನಮ್ಮ ನಡುವೆ ಭಿನ್ನ ಇಲ್ಲ, ಹೈಕಮಾಂಡ್‌ ಹೇಳಿದಂತೆ ಕೇಳ್ತೇವೆ: ಸಿಎಂ,ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್‌ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನ ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದ್ದು, ಈ ನಡುವಲ್ಲೇ ಇಂದು ಉಪಹಾರ ಸಭೆ ಮಾಡಲಾಗಿತ್ತು.

Must Read