October 11, 2026
Sunday, October 11, 2026
spot_img

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶನಿವಾರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

Must Read