ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಲಿಯ ಖ್ಯಾತ ನಟಿ ಅಂಡ್ರಿಲಾ ಶರ್ಮಾ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಭಾನುವಾರ ಮಧ್ಯಾಹ್ನ ನಿಧನರಾದರು.
24 ವರ್ಷದ ಯುವತಿ ಶನಿವಾರ ಮತ್ತು ಭಾನುವಾರದ ಮಧ್ಯ ರಾತ್ರಿಯಲ್ಲಿ ಅನೇಕ ಹೃದಯ ಸ್ತಂಭನಗಳಿಗೆ ಒಳಗಾದರು ಎಂದು ತಿಳಿದು ಬಂದಿದೆ.
ಅಂಡ್ರಿಲಾ ಶರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಕೊನೆಯುಸಿರೆಳೆದರು ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ಅಂಡ್ರಿಲಾ ಶರ್ಮಾ ಬಾಯ್ ಫ್ರೆಂಡ್ ವದಂತಿಯನ್ನು ತಳ್ಳಿ ಹಾಕಿದ್ದರು. ಆದರೆ ಅಂಡ್ರಿಲಾ ಸ್ಥಿತಿ ಕ್ಷಣ ಕ್ಷಣಕ್ಕೂ ಗಂಭೀರವಾಗುತ್ತಿತ್ತು.ಆದರೆ ಚಿಕಿತ್ಸೆಯಲ್ಲಿದ್ದ ಅವರು ಶನಿವಾರ ಕೊನೆಯುಸಿರೆಳೆದರು.
ಅಂಡ್ರಿಯಾ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬಂಗಾಲಿ ಕಿರುತೆರೆ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ
ನವೆಂಬರ್ 1 ರಂದು ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದ ನಂತರ ನಟಿ ಅಂಡ್ರಿಲಾ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇಂಟ್ರಾಕ್ರೇನಿಯಲ್ ಹೆಮರೇಜ್ (intracranial hemorrhage)ನಿಂದ ಬಳಲುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.