March 3, 2026
Tuesday, March 3, 2026
spot_img

ಕುರ್ಚಿ ಕಲಹದಲ್ಲಿ ಮಠಾಧಿಪತಿಗಳ ಹಸ್ತಕ್ಷೇಪವೇಕೆ?: ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಕಾರಣಿಗಳು ತಮ್ಮ ರಾಜಕೀಯವನ್ನು ಮಾಡಲಿ, ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹವನ್ನು ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹದ ವಿಚಾರದಲ್ಲಿ ಸ್ವಾಮೀಜಿಗಳು ಅನಗತ್ಯವಾಗಿ ಮಧ್ಯ ಪ್ರವೇಶಿಸುವುದು ಸರಿಯಲ್ಲ. ಈ ವಿಷಯದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಎಂದು ಅಭಿಪ್ರಾಯಪಟ್ಟರು.

ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕಲಹದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೆಚ್‌ಡಿಕೆ, “ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಕಳೆದುಕೊಂಡಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ,” ಎಂದು ಒತ್ತಿ ಹೇಳಿದರು.

ಒಕ್ಕಲಿಗ ಸಮಾಜ ಮಾತ್ರವಲ್ಲದೆ, ಬೇರೆ ಯಾವುದೇ ಸಮಾಜದ ಬಗ್ಗೆಯೂ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಮತ್ತು ಧರ್ಮಗಳ ವಿಚಾರವನ್ನು ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನು ದುರುಪಯೋಗಪಡಿಸಿಕೊಂಡು ರಾಜಕಾರಣ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !