ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 6 ಅಪರಾಧಿಗಳನ್ನು ಬಿಡುಗಡೆಗೊಳಿಸಿ ಕೆಲವೇ ದಿನದಲ್ಲಿ ಸುಪ್ರೀಂ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ.
ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕಾರ ಕೂಡ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಆದೇಶವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಸುಪ್ರೀಂ ಕೋರ್ಟ್ ಆದೇಶ ಒಪ್ಪಲು ಸಾಧ್ಯವಿಲ್ಲ ಎಂದಿದೆ. ರಾಜೀವ್ ಹಂತಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಹೊರತು ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿಲ್ಲ. ಹೀಗಾಗಿ ರಾಜೀವ್ ಹಂತರನ್ನು ಹೀರೋಗಳಂತೆ ಬಿಂಬಿಸುವುವುದು ತಪ್ಪು ಎಂದು ಕಾಂಗ್ರೆಸ್ ಹೇಳಿದೆ.
ನವೆಂಬರ್ 11ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಬಿವಿ ನಾಗರತ್ನ ಅವರ ನ್ಯಾಯಪೀಠ ರಾಜೀವ್ ಗಾಂಧಿ ಕೊಲೆ ಪ್ರಕರಣದಲ್ಲಿ 3 ದಶಕಗಳಿಗೂ ಹೆಚ್ಚು ಸಮಯ ಜೀವಾವಧಿ ಶಿಕ್ಷೆ ಅನುಭವಿಸಿದ 6 ಅಪರಾಧಿಗಳನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿತ್ತು.
ಮೇ 21, 1991ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್ನಿಂದ ಹತ್ಯೆಗೀಡಾಗಿದ್ದರು.