ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ಬೆಳಗ್ಗೆ ಸೊಲೊಮನ್ ದ್ವೀಪಗಳ ಮಲಂಗೋದ ನೈಋತ್ಯ ಭಾಗದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ದಾಖಲಾಗಿದೆ. ಭೂಕಂಪ ಆಗಿರುವುದಾಗಿ ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ನವೆಂಬರ್ 22 ರಂದು 02:03:07 (UTC) ಕ್ಕೆ 15.0 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.
ಭೂಕಂಪದ ಕೇಂದ್ರಬಿಂದುವನ್ನು 9.790 ಡಿಗ್ರಿ ದಕ್ಷಿಣ ರೇಖಾಂಶ ಮತ್ತು 159.601 ಡಿಗ್ರಿ ಪೂರ್ವ ರೇಖಾಂಶದಲ್ಲಿ ನಿರ್ಧರಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ. ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ ಒಂದು ದಿನದ ನಂತರ ಈ ಭೂಕಂಪ ಸಂಭವಿಸಿದೆ.
ಇಂಡೋನೇಷ್ಯಾದ ಜಾವಾದಲ್ಲಿ ಭೂಕಂಪ ಸಂಭವಿಸಿ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಜಾವಾ ಗವರ್ನರ್ ರಿದ್ವಾನ್ ಕಾಮಿಲ್ ಹೇಳಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.