ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ 75 ನೇ ಜನ್ಮ ದಿನದ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಇಂದು 75 ನೇ ಜನ್ಮ ದಿನದ ಸಂಭ್ರಮ.
ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ಹೆಗ್ಗಡೆ ದಂಪತಿಗೆ 1948ರ ನ.25 ರಂದು ಜನಿಸಿದ ಹೆಗ್ಗಡೆಯವರು ತಮ್ಮ ಇಪ್ಪತ್ತರ ಹರಯದಲ್ಲಿ ಕ್ಷೇತ್ರದ ಇಪ್ಪತ್ತೊಂದನೆಯ ಧರ್ಮಾಧಿಕಾರಿಗಳಾಗಿ ಆಡಳಿತ ವಹಿಸಿಕೊಂಡರು.

1972 ರಲ್ಲಿ‌ ಹೇಮಾವತಿ‌ಯವರನ್ನು ವಿವಾಹವಾದರು. ಕಳೆದ ಐವತ್ತನಾಲ್ಕು ವರ್ಷಗಳಲ್ಲಿ ಧರ್ಮಸ್ಥಳದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಮುಖಗಳಲ್ಲಿ ಮಹತ್ತರ ಪರಿವರ್ತನೆಗಳಾಗಿವೆ. ಧರ್ಮಸ್ಥಳದ ಸುವರ್ಣಯುಗ ಪ್ರವರ್ತಕರೆಂದೇ ಪ್ರಸಿದ್ಧರಾಗಿದ್ದಾರೆ. ಇವರ ಬಹುಮುಖಿ ಸಾಧನೆಗಳಿಗಾಗಿ ಹಲವಾರು ಸಂಸ್ಥೆಗಳು ಪುರಸ್ಕರಿಸಿವೆ. ‌

ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದರೆ, ಕೇಂದ್ರ ಸರ್ಕಾರ ಪದ್ಮ ಭೂಷಣ, ಪದ್ಮ ವಿಭೂಷಣ ಹಾಗೂ ಇತ್ತೀಚೆಗೆ ರಾಜ್ಯಸಭಾ ಸದಸ್ಯತ್ವ ನೀಡಿ ಗೌರವಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!