ಹೊಸದಿಗಂತ ಡಿಜಿಟಲ್ ಡೆಸ್ಕ್:
ಫಿಫಾ ಫುಟ್ಬಾಲ್ ವಿಶ್ವಕಪ್ನಲ್ಲಿ ಅರ್ಜೆಂಟೀನಾ ವಿರುದ್ಧ ಗೆದ್ದಿದ್ದ ಸೌದಿ ಅರೇಬಿಯಾ ಆಟಗಾರರಿಗೆ ಸರ್ಕಾರದಿಂದ ದುಬಾರಿ ಗಿಫ್ಟ್ ಘೋಷಣೆಯಾಗಿದೆ.
ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ವಿರುದ್ಧ 2-1 ಗೋಲುಗಳ ಅಂತರದಿಂದ ಸೌದಿ ಅರೇಬಿಯಾ ಗೆದ್ದ ಬೆನ್ನಲ್ಲೇ ಸೌದಿ ಅರೇಬಿಯಾ ಸರಕಾರ ಗೆಲುವಿಗೆ ಕಾರಣರಾದ ಆಟಗಾರರಿಗೆ ದುಬಾರಿ ರೋಲ್ಸ್ ರಾಯ್ಸ್ (Rolls-Royce) ಫ್ಯಾಂಟಮ್ ಕಾರ್ ಉಡುಗೊರೆಯಾಗಿ ನೀಡುವುದಾಗಿ ತಿಳಿಸಿದೆ.
ಅರ್ಜೆಂಟೀನಾ ವಿರುದ್ಧ ಗೆದ್ದ ಬಳಿಕ ಸಂಭ್ರಮಾಚರಣೆಗಾಗಿ ಸೌದಿ ಅರೇಬಿಯಾ ಸರ್ಕಾರ ನ.23 ರಂದು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿತ್ತು. ಇದೀಗ ಆಟಗಾರರಿಗೆ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್ ಘೋಷಿಸಿದೆ.