January16, 2026
Friday, January 16, 2026
spot_img

ರಾಂಚಿಯಲ್ಲಿ ಹಿಟ್‌ಮ್ಯಾನ್‌ ಅಬ್ಬರ: ಅಫ್ರಿದಿಯ ವಿಶ್ವ ದಾಖಲೆ ಮುರಿದ ರೋಹಿತ್‌ ಶರ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದಾರೆ.

ಜೊತೆಗೆ ತಮ್ಮ ಇನ್ನಿಂಗ್ಸ್​ನಲ್ಲಿ ಮೂರು ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪಾಕಿಸ್ತಾನದ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ರಾಂಚಿ ಏಕದಿನ ಪಂದ್ಯಕ್ಕೂ ಮುನ್ನ, ರೋಹಿತ್ ಶರ್ಮಾ 268 ಇನ್ನಿಂಗ್ಸ್‌ಗಳಲ್ಲಿ 349 ಸಿಕ್ಸರ್‌ಗಳನ್ನು ಬಾರಿಸಿದ್ದರು. ಹೀಗಾಗಿ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಮುರಿಯಲು ರೋಹಿತ್​ಗೆ ಕೇವಲ ಮೂರು ಸಿಕ್ಸರ್‌ಗಳು ಬೇಕಾಗಿದ್ದವು. ಈ ಪಂದ್ಯದ 20 ನೇ ಓವರ್‌ನಲ್ಲಿ ತಮ್ಮ ಮೂರನೇ ಸಿಕ್ಸರ್ ಬಾರಿಸಿದ ರೋಹಿತ್, ಅಫ್ರಿದಿ ಅವರ ದಾಖಲೆಯನ್ನು ಮುರಿದರು.

ರೋಹಿತ್ ಕೇವಲ 269 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ವಿಶ್ವದಾಖಲೆ ನಿರ್ಮಿಸಿದರು.

Must Read

error: Content is protected !!