ಹೊಸದಿಗಂತ ಡಿಜಿಟಲ್ ಡೆಸ್ಕ್
ಇಸ್ರೋ (Indian Space Research Organisation) (ISRO) ಓಷನ್‍ಸ್ಯಾಟ್ 3 (Oceansat), ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ 54 ರಾಕೆಟ್ (PSLV-C54 Rocket) ಅನ್ನು ಯಶಸ್ವಿಯಾಗಿ ಉಡಾಯಿಸಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಉಪಗ್ರಹಗಳನ್ನು ಸನ್-ಸಿಂಕ್ರೋನಸ್ ಧ್ರುವೀಯ ಕಕ್ಷೆಗೆ ಸೇರಿಸಲಾಗುತ್ತದೆ.
ಇದರಲ್ಲಿ ಎಲ್‍ವಿ-ಸಿ 54 ರಾಕೆಟ್‍ನಲ್ಲಿ ಓಷನ್‍ಸ್ಯಾಟ್ 3, ಆನಂದ್ ಉಪಗ್ರಹಗಳು ಸೇರಿದಂತೆ ಇತರ 8 ನ್ಯಾನೊ ಉಪಗ್ರಹಗಳಿವೆ. ಪಿಕ್ಸ್‍ಕ್ಷೆಲ್‍ನ ಭೂತಾನ್‍ಸ್ಯಾಟ್, ಅಮೆರಿಕದ ಸ್ಪೇಸ್‍ಫ್ಲೈಟ್‍ನ ನಾಲ್ಕು ಆ್ಯಸ್ಟ್ರೋಕಾಸ್ಟ್ ಉಪಗ್ರಹಗಳು ಕೂಡ ಸೇರಿವೆ.
ಆನಂದ್ ನ್ಯಾನೊ ಉಪಗ್ರಹ ಭೂಮಿಯ ಕೆಳ ಕಕ್ಷೆಯಲ್ಲಿ ಮೈಕ್ರೋಸ್ಯಾಟಲೈಟ್ ಬಳಸಿಕೊಂಡು ಭೂಮಿಯ ವೀಕ್ಷಣೆ ನಡೆಸಲಿದೆ. ಥೈಬೋಲ್ಟ್ ಉಪಗ್ರಹವು ಸಂವಹನಕ್ಕೆ ಸಂಬಂಧಿಸಿದ್ದಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿದೆ. ಜೊತೆಗೆ ಸಾಗರ ವೀಕ್ಷಣೆ, ಭೂ ವೀಕ್ಷಣೆಗಾಗಿ ಇಂಡೊ-ಫ್ರೆಂಚ್ ಸಹಭಾಗಿತ್ವ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಉಪಗ್ರಹಗಳೂ ಸೇರಿವೆ.