Wednesday, September 3, 2025

ಮುಂದಿನ 24 ಗಂಟೆಗಳಲ್ಲಿ ಭಾರತಕ್ಕೆ ಹೆಚ್ಚುವರಿ ಸುಂಕ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಷ್ಯಾದಿಂದ ತೈಲ ಖರೀದಿಸುವ ಭಾರತದ ನಿರ್ಧಾರವನ್ನು ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ವಿರುದ್ಧ ಮತ್ತೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ 24 ಗಂಟೆಗಳ ಒಳಗೆ ಭಾರತಕ್ಕೆ ಮತ್ತಷ್ಟು ಸುಂಕ ವಿಧಿಸುವುದಾಗಿ ಹೇಳಿದ್ದಾರೆ.

CNBC ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಭಾರತ ಒಳ್ಳೆಯ ವ್ಯಾಪಾರ ಪಾಲುದಾರರಾಗಿಲ್ಲ. ಏಕೆಂದರೆ ಅವರು ನಮ್ಮೊಂದಿಗೆ ಸಾಕಷ್ಟು ವ್ಯಾಪಾರ ಮಾಡ್ತಾರೆ. ಆದರೆ ನಾವು ಅವರೊಂದಿಗೆ ವ್ಯಾಪಾರ ಮಾಡುವುದಿಲ್ಲ. ಆದ್ದರಿಂದ ನಾವು ಶೇ. 25 ರಷ್ಟು ಸುಂಕ ವಿಧಿಸಿದ್ದೇವೆ ಎಂದಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಸುಂಕವನ್ನು ಗಣನೀಯವಾಗಿ ಹೆಚ್ಚಿಸಲಾಗುವುದು. ಏಕೆಂದರೆ ಭಾರತದವರು ರಷ್ಯಾದಿಂದ ತೈಲವನ್ನು ಖರೀದಿಸುತ್ತಿದ್ದಾರೆ. ಆ ಮೂಲಕ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಕಳೆದ ವಾರ ಭಾರತ ಮತ್ತು ರಷ್ಯಾದ ಆರ್ಥಿಕತೆಗಳನ್ನು ಸತ್ತ ಆರ್ಥಿಕತೆಗಳು ಎಂದು ಕರೆದಿದ್ದ ಟ್ರಂಪ್, ತದನಂತರ ಭಾರತದ ವಿರುದ್ಧ ಮತ್ತಷ್ಟು ಟೀಕೆಗಳನ್ನು ಮಾಡುತ್ತಲೇ ಇದ್ದಾರೆ. ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಸುಂಕವನ್ನು ವಿಧಿಸಿದ ನಂತರ ಇದೀಗ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ