ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಹಲಸೂರು ಗೇಟ್ ಠಾಣೆ ಪೊಲೀಸರಿಂದ ಶಿವಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಶಿವಕುಮಾರ್ ಚಿಲುಮೆ ಸಂಸ್ಥೆಗೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಬಿಬಿಎಂಪಿ ಅಧಿಕಾರಿಗಳ ಸಹಿ ಪಡೆದು, ಐಡಿಗಳನ್ನು ಚಿಲುಮೆ ಸಂಸ್ಥೆಗೆ ತಂದು ಕೊಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಆರೋಪಿ ಶಿವಕುಮಾರ್ ಬಂಧಿಸಿರುವಂತ ಹಲಸೂರು ಗೇಟ್ ಠಾಣೆಯ ಪೊಲೀಸರು, ವಿಚಾರಣೆಯನ್ನು ನಡೆಸುತ್ತಿದ್ದಾರೆ.