ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಯೋಧರ ಮೇಲೆ ಅವರ ಸಹೋದ್ಯೋಗಿಗಳಲ್ಲೇ ಒಬ್ಬಾತ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಯೋಧರು ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡಿದ್ದಾರೆ.
ಪೋರಬಂದರ್ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾಧಿಕಾರಿ ಎ.ಎಂ.ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದ ಎಲ್ಲಾ ಜವಾನರು ಮಣಿಪುರದ ಸಿಆರ್‌ಪಿಎಫ್ ಬೆಟಾಲಿಯನ್‌ಗೆ ಸೇರಿದವರು ಎಂದು ಹೇಳಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಆಯೋಗವು ಅವರನ್ನು ಇಲ್ಲಿಗೆ ಕಳುಹಿಸಿತ್ತು ಎಂದು ಅವರು ಹೇಳಿದ್ದಾರೆ.
“ಶನಿವಾರ ಸಂಜೆ ಯಾವುದೋ ವಿಚಾರಕ್ಕೆ ಕುಪಿತಗೊಂಡ ಯೋಧನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಆಕ್ರಮಣಕಾರಿಯಾಗಿ ರೈಫಲ್‌ನಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ಇಬ್ಬರು ಜವಾನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ಗುಜರಾತ್ ಚುನಾವಣೆಯು ಮೊದಲ ಹಂತದಲ್ಲಿ ಪೋರಬಂದರ್ ಜಿಲ್ಲೆಯಲ್ಲಿ ಮತದಾನ ಡಿಸೆಂಬರ್ 1 ರಂದು ನಡೆಯಲಿದೆ.
ಪೋರಬಂದರ್‌ನಿಂದ ಸುಮಾರು 25 ಕಿಮೀ ದೂರದಲ್ಲಿರುವ ತುಕ್ಡಾ ಗೋಸಾ ಗ್ರಾಮದ ಸೈಕ್ಲೋನ್ ಸೆಂಟರ್‌ನಲ್ಲಿ ಯೋಧರು ತಂಗಿದ್ದರು. ಈ ಕೇಂದ್ರವನ್ನು ಭೇಟಿ ನೀಡುವ ಸಿಆರ್‌ಪಿಎಫ್ ಯೋಧರಿಗೆ ಆಶ್ರಯ ತಾಣವಾಗಿ ಬಳಸಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ