ಹೊಸದಿಗಂತ ಡಿಜಿಟಲ್ ಡೆಸ್ಕ್
ಬಿಹಾರದ ಸರನ್ ಜಿಲ್ಲೆಯಲ್ಲಿ ಶವಸಂಸ್ಕಾರಕ್ಕೆ ತೆರಳುತ್ತಿದ್ದ ಜನರ ಗುಂಪಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸುಮಾರು 18 ಮಂದಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಜನರು ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ರಸ್ತೆಬದಿಯಲ್ಲಿ ತೆರಳುತ್ತಿದ್ದಾಗ ಕಾರು ಜನಸಂದಣಿಯತ್ತ ಸಾಗಿತು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಗ್ರಾಮಸ್ಥರ ಪ್ರಕಾರ ಚಾಲಕ ಕುಡಿದ ಮತ್ತಿನಲ್ಲಿದ್ದ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.