SHOCKING NEWS | ಕೆನಡಾದಲ್ಲಿ ರಸ್ತೆ ಅಪಘಾತ: ಭಾರತೀಯ ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೈಕಲ್ ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಭಾ ಕಾರ್ತಿಕ್ ಸೈನಿ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
2021ರ ಆಗಸ್ಟ್‌ನಲ್ಲಿ ಭಾರತದಿಂದ ಕೆನಡಾಕ್ಕೆ ತೆರಳಿದ್ದರು. ಕಾರ್ತಿಕ್ ಅವರ ಕುಟುಂಬವು ಹರಿಯಾಣದ ಕರ್ನಾಲ್‌ನಲ್ಲಿ ನೆಲೆಸಿದೆ ಎಂದು ತಿಳಿದು ಬಂದಿದೆ.
ಕಾರ್ತಿಕ್ ಕೆನಡಾದ ಶೆರಿಡನ್ ಕಾಲೇಜಿನಲ್ಲಿ ದಾಖಲಾಗಿದ್ದಾನೆ. ಕಾರ್ತಿಕ್ ಅವರ ದುರಂತ ಸಾವು ಅತೀವ ದುಃಖವನ್ನು ಉಂಟುಮಾಡಿದೆ, ಅವರ ಕುಟುಂಬ, ಸ್ನೇಹಿತರು, ಸಹಪಾಠಿಗಳು ಮತ್ತು ಶಿಕ್ಷಕರಿಗೆ ಆಳವಾದ ಸಹಾನುಭೂತಿಯನ್ನು ವ್ಯಕ್ತಪಡಿಸಿದೆ ಎಂದು ಕಾಲೇಜು ಮಂಡಳಿ ಇಮೇಲ್‌ ಮೂಲಕ ತಿಳಿಸಿದೆ.
ಮಗನ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸಬೇಕೆಂದು ಕುಟುಂಬ ಮನವಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!